ಪಠ್ಯ ಪರಿಷ್ಕರಣೆಗೆ ಮುಂದಾದ ಸರ್ಕಾರ; ಬರಗೂರು ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ
ಬೆಂಗಳೂರು; ಬಿಜೆಪಿ ಸರ್ಕಾರದಲ್ಲಿ ನಡೆದ ಶಾಲಾ ಪಠ್ಯ ಪರಿಷ್ಕರಣೆ ವಿವಾದಕ್ಕೀಡಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಇದರ ಪರಿಷ್ಕರಣೆಗೆ ಮುಂದಾಗಿದೆ. ಇದಕ್ಕಾಗಿ ಬರಗೂರು ರಾಮಚಂದ್ರಪ್ಪ ನೇತೃತ್ವದ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ. ಪಠ್ಯದಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿ ಹಲವರ ಜೊತೆ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸದ್ಯ ಶಾಲಾ ಪಠ್ಯದಲ್ಲಿ ಯಾವ ಯಾವ ಪಾಠಗಳನ್ನು ಕೈಬಿಡಬೇಕು?, ಯಾವ ಪದಗಳನ್ನು ಕೈಬಿಡಬೇಕು ಎಂಬುದನ್ನು ಗುರುತಿಸಿ ಮಾಹಿತಿ ನೀಡುವಂತೆ ಸಿದ್ದರಾಮಯ್ಯ ಅವರು ಸಮಿತಿಗೆ ಸೂಚನೆ ನೀಡಿದ್ದಾರೆ. ಒಂದು ವಾರದಲ್ಲಿ ವರದಿ ನೀಡುವಂತೆಯೂ ಸೂಚಿಸಲಾಗಿದೆ. ಪ್ರಸ್ತಕ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಠ ಸೇರ್ಪಡೆ ಇರುವುದಿಲ್ಲ, ಆದ್ರೆ ಕಳೆದ ವರ್ಷ ಸೇರಿಸಲಾದ ಪಾಠಗಳಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ.