Bengaluru

ಟಾಪ್‌ ಟೆನ್‌ ವಿವಿಗಳಲ್ಲಿ ಬೆಂಗಳೂರಿನ ಐಐಎಸ್‌ಸಿ ಫಸ್ಟ್‌

ಬೆಂಗಳೂರು; ಕೇಂದ್ರ ಶಿಕ್ಷಣ ಇಲಾಖೆ ಈ ಸಾಲಿನ ಟಾಪ್‌ ಟೆನ್‌ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾ ಸಂಸ್ಥೆ (ಐಐಎಸ್‌ಸಿ) ಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇನ್ನು ಮಣಿಪಾಲದ ಮಣಿಪಾಲ್‌ ಉನ್ನತ ಶಿಕ್ಷಣ ಅಕಾಡೆಮಿ ಏಳನೇ ಸ್ಥಾನ ಪಡೆದುಕೊಂಡಿದೆ.

2022ನೇ ಸಾಲಿನ ರಾಷ್ಟ್ರೀಯ ರ‍್ಯಾಂಕಿಂಗ್ ಪ್ರೇಮ್‌ವರ್ಕ್ (ಎನ್‌ಐಆರ್‌ಎಫ್‌) ಶ್ರೇಯಾಂಕಗಳನ್ನು ಕೇಂದ್ರ ಶಿಕ್ಷಣ ಇಲಾಖೆ ನೀಡಿದ್ದು, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ದೆಹಲಿಯ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು), ಮೂರನೇ ಸ್ಥಾನದಲ್ಲಿ ಜಾಮಿಯ ಮಿಲಿಯ ಇಸ್ಲಾಮಿಯಾ, ನಾಲ್ಕನೇ ಸ್ಥಾನದಲ್ಲಿ ಕೋಲ್ಕತ್ತಾದ ಜಾದವಪುರ ವಿಶ್ವವಿದ್ಯಾಲಯ, ಐದನೇ ಸ್ಥಾನದಲ್ಲಿ ತಮಿಳುನಾಡಿನ ಕೊಯಮತ್ತೂರಿನ ಅಮೃತ ವಿಶ್ವ ವಿದ್ಯಾಪೀಠಮ್‌ ಇದೆ.

ಇನ್ನು ಆರನೇ ಸ್ಥಾನದಲ್ಲಿ ವಾರಾಣಸಿಯ ಬನಾರಸ್‌ ಹಿಂದೂ ವಿಶ್ವವಿದ್ಯಾಲಯ, ಏಳನೇ ಸ್ಥಾನದಲ್ಲಿ ಮಣಿಪಾಲದ ಮಣಿಪಾಲ್‌ ಉನ್ನತ ಶಿಕ್ಷಣ ಅಕಾಡೆಮಿ, ಎಂಟನೇ ಸ್ಥಾನದಲ್ಲಿ ಕೋಲ್ಕತ್ತ ವಿಶ್ವವಿದ್ಯಾಲಯ, ಒಂಬತ್ತನೇ ಸ್ಥಾನದಲ್ಲಿ ತಮಿಳುನಾಡಿನ ವೇಲೂರು ತಾಂತ್ರಿಕ ವಿದ್ಯಾ ಸಂಸ್ಥೆ ಹಾಗೂ ಹತ್ತನೇ ಸ್ಥಾನದಲ್ಲಿ ಹೈದರಾಬಾದ್‌ ವಿಶ್ವವಿದ್ಯಾಲಯ ಇದೆ. ಟಾಪ್‌ ಟೆನ್‌ ಪಟ್ಟಿಯಲ್ಲಿ ಕರ್ನಾಟಕದ ಎರಡು ಶಿಕ್ಷಣ ಸಂಸ್ಥೆಗಳಿರುವ ಕನ್ನಡಿಗರ ಪಾಲಿಗೆ ಹೆಮ್ಮೆಯ ವಿಚಾರ.

Share Post