Bengaluru

ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದ ನೀಟ್‌ ಕೋಚಿಂಗ್‌; ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ನೀಟ್‌ ಪರೀಕ್ಷೆ ಬೇಡ ಎಂಬ ಒತ್ತಡ ಹೆಚ್ಚಾಗುತ್ತಿರುವ ವೇಳೆಯಲ್ಲೇ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು, ನೀಟ್‌ ಕೋಚಿಂಗ್‌ ಸೆಂಟರ್‌ಗಳನ್ನು ಶುರು ಮಾಡುವ ಮಾತನ್ನಾಡುತ್ತಿದ್ದಾರೆ. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ನೀಟ್‌ ಕೋಚಿಂಗ್‌ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ನೀಟ್‌ ಪರೀಕ್ಷೆ ಬಗ್ಗೆ ಪ್ರಶ್ನೆ ಎತ್ತಿದರು. ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್‌, ನೀಟ್‌ ಕೋಚಿಂಗ್ ಕೇಂದ್ರ ತೆರೆಯುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ನೀಟ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಹೊಸ ನೀತಿ ಮಾಡಲು ಸಾಧ್ಯವಿಲ್ಲ. ನೀಟ್‌, ನ್ಯಾಷನಲ್‌ ಮೆಡಿಕಲ್‌ ಕೌನ್ಸಿಲ್‌ ಅಧೀನದಲ್ಲಿ ಬರುತ್ತದೆ. ಈಗಿರುವ ನೀತಿಯ ಪ್ರಕಾರ, ಶೇ 85 ರಷ್ಟು ಸೀಟ್‌ಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತು ಶೇ 15 ರಷ್ಟು ಸೀಟ್‌ಗಳನ್ನು ಅಖಿಲ ಭಾರತ ಕೋಟಾದಡಿ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Share Post