Bengaluru

ಗ್ರಾಮ ಒನ್‌ ಕೇಂದ್ರಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ ಒನ್‌ಗೆ ಇಂದು ಚಾಲನೆ ನೀಡಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವರ್ಚ್ಯುಯಲ್‌ ಮೂಲಕ ಗ್ರಾಮ ಒನ್‌ಗೆ ಚಾಲನೆ ನೀಡಿದರು. ಏಕಕಾಲದಲ್ಲಿ 300 ಗ್ರಾಮ ಒನ್‌ ಕೇಂದ್ರಗಳಿಗೆ ಸಿಎಂ ಹಸಿರು ನಿಶಾನೆ ತೋರಿಸಿದರು.

ಸರ್ಕಾರದ ಕೆಲಸಗಳು ಹಾಗೂ ಸೌಲಭ್ಯಗಳು ಜನರು ಇರುವಲ್ಲಿಗೇ ತಲುಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಜಿ2ಸಿ ಸೇವೆಗಳು, ಬ್ಯಾಂಕಿಂಗ್ ಸೇವೆಗಳು, ಆರ್.ಟಿ.ಐ. ಪ್ರಶ್ನೆಗಳು ಇತ್ಯಾದಿ ಸೇವೆಗಳು, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಸೇರಿದಂತೆ ಸರ್ಕಾರ ಎಲ್ಲಾ ರೀತಿಯ ಸೇವೆಗಳನ್ನು ಇಲ್ಲಿ ಪಡೆಯಬಹುದು. ಜನರು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ತಮ್ಮ ಗ್ರಾಮದಲ್ಲೇ ಗ್ರಾಮ ಒನ್‌ ಕೇಂದ್ರದ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲಾ ಸೌಲಭ್ಯ ಪಡೆಯಲು ಇದರಿಂದ ಸಾಧ್ಯವಾಗಲಿದೆ.

ಈ ಗ್ರಾಮ ಒನ್‌ ಕೇಂದ್ರಗಳು ವಾರದ ಏಳೂ ದಿನಗಳ ಕೆಲಸ ಮಾಡಲಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ತೆರೆದಿರುತ್ತವೆ.

 

Share Post