BengaluruPolitics

ಆಗಸ್ಟ್ 5ರಂದು ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆ ಲಾಂಚ್

ಬೆಂಗಳೂರು; ಆಗಸ್ಟ್ 5ರಂದು ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆಯನ್ನು ಅಧಿಕೃತವಾಗಿ ಲಾಂಚ್ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಕಲಬುರಗಿಯಲ್ಲಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

12 ತಿಂಗಳ ಸರಾಸರಿ ತೆಗೆದುಕೊಂಡು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಈಗಾಗಲೇ ಜುಲೈ ತಿಂಗಳ ಗೃಹಜ್ಯೋತಿ ಬಿಲ್‌ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಈಗಾಗಲೇ 1.43 ಕೋಟಿ ಮಂದಿ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಸರಾಸರಿ ಬಿಲ್‌ ಮೇಲೆ ಶೇಕಡಾ ಹತ್ತರಷ್ಟು ಹೆಚ್ಚು ಬಳಕೆ ಮಾಡಬಹುದು. ಅದಕ್ಕಿಂತ ಜಾಸ್ತಿ ಬಳಕೆ ಮಾಡಿದರೆ ಪಾವತಿ ಮಾಡಬೇಕಾಗುತ್ತದೆ. 200 ಯೂನಿಟ್‌ಗಿಂತ ಹೆಚ್ಚು ಬಳಸಿದರೆ ಪೂರ್ತಿ ಹಣ ಪಾವತಿ ಮಾಡಬೇಕು ಎಂದು ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಕಲಬುರಗಿ ಜಿಲ್ಲಾ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದೂ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

Share Post