BengaluruPolitics

1 ಕೋಟಿ 10 ಲಕ್ಷ ಜನಕ್ಕೆ ಗೃಹಲಕ್ಷ್ಮೀ ಹಣ ತಲುಪಲಿದೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್‌ 30ರಂದು ಚಾಲನೆ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡವರನ್ನು ನಗರದ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಭೇಟಿ ಮಾಡಲು ಬಂದಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಸರ್ಕಾರಕ್ಕೆ ನೂರು ದಿನ ಆಗುತ್ತಿದೆ. ಜೊತೆ ನಾನು ಕೊಟ್ಟ ಗ್ಯಾರೆಂಟಿ ಆಸ್ವಾಸನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡಬೇಕಾಗಿದೆ. ಹೀಗಾಗಿ ಆಗಸ್ಟ್‌ 30ರಂದು ಮೈಸೂರಿನಲ್ಲಿ ಬೃಹತ್‌ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಆಗಮಿಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಚುನಾವಣೆಗೂ ಮೊದಲು ನಾನು ಹಾಗೂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿಯ ಆಶೀರ್ವಾದ ಪಡೆದಿದ್ದೆವು. ದೇಗುಲದಲ್ಲಿ ಗ್ಯಾರೆಂಟಿ ಕಾರ್ಡ್‌ಗೆ ಸಹಿ ಹಾಕಿ, ಈ ಗ್ಯಾರೆಂಟಿಗಳನ್ನು ಜಾರಿ ಮಾಡುವ ಶಕ್ತಿ ನಮಗೆ ಕೊಡೆಂದು ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೆವು. ಇದೀಗ ನಾವು ದೇವಿಯ ಆಶೀರ್ವಾದದಂತೆ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈಗಾಗಲೇ ಎಲ್ಲರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದ್ದಾಳೆ. ಗೃಹಲಕ್ಷ್ಮೀಯನ್ನು ಎಲ್ಲರ ಮನೆಗೆ ತಲುಪಿಸಬೇಕಿದೆ. ಅದು ಆಗಸ್ಟ್‌ 30ರಂದು ನೆರವೇರಲಿದೆ ಎಂದು ಹೇಳಿದರು.

ಸುಮಾರು 1.10 ಕೋಟಿ ಮಹಿಳೆಯರು ಈ ಯೋಜನೆಡಯಿ ನೋಂದಾಯಿಸಿಕೊಂಡಿದ್ದಾರೆ. ಇವರಿಗೆಲ್ಲಾ ಆಗಸ್ಟ್‌ 30ರಂದು ಹಣ ವರ್ಗಾವಣೆ ಪ್ರಕ್ರಿಯೆ ಶುರುವಾಗಲಿದೆ. ಅಂದಿನಿಂದ ಒಂದೆರಡು ದಿನದಲ್ಲಿ ಎಲ್ಲರ ಖಾತೆಗೂ ಹಣ ಜಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.

Share Post