ಗೃಹಲಕ್ಷ್ಮೀ ಯೋಜನೆ ನೋಂದಣಿ ಸ್ಥಗಿತವಾಗಿಲ್ಲ; ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಬೆಂಗಳೂರು; ಗೃಹಲಕ್ಷ್ಮೀ ಯೋಜನೆ ಸ್ಥಗಿತವಾಗಿಲ್ಲ. ಈ ಸುದ್ದಿ ಕೇಳಿ ನನಗೇ ಅಚ್ಚರಿಯಾಯಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವರು, ಅಚಾತುರ್ಯದಿಂದ ನಮ್ಮ ಇಲಾಖೆಯಿಂದ ಟ್ವೀಟ್ ಆಗಿದೆ. ಯಾರು ಮಾಡಿದರು ಅನ್ನೋದು ಗೊತ್ತಾಗಿಲ್ಲ ಎಂದು ಹೇಳಿದರು.
ಟ್ವೀಟ್ ಸಂಬಂಧ ಎಲ್ಲರಿಗೂ ಈಗಾಗಲೇ ನೋಟಿಸ್ ಜಾರಿ ಮಾಡಿದ್ದೇವೆ. ಅಧಿಕಾರಿಗಳನ್ನೂ ಕರೆಸಿ ಮಾತನಾಡಿದ್ದೇನೆ ಎಂದು ಹೇಳಿದರು. ಸಾಮಾಜಿಕ ಜಾಲತಣ ನಿರ್ವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಸಚಿವರು ಹೇಳಿದ್ದಾರೆ. ಈಗಾಗಲೇ ಫಲಾನುಭವಿಗಳ ಅಕೌಂಟ್‌ಗೆ ಹಣ ಹೋಗುತ್ತಿದೆ. ನಮ್ಮ ಇಲಾಖೆಯಿಂದ ಪೂರ್ತಿ ಹಣ ಜಮೆಯಾಗಿದೆ. ಆದ್ರೆ ಬ್ಯಾಂಕ್‌ಗಳಿಂದ ಸ್ಲೋ ಆಗಿ ಹಣ ವರ್ಗಾವಣೆ ಆಗುತ್ತಿದೆ ಎಂದು ಹೇಳಿದರು.