ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ..?
ಬೆಂಗಳೂರು; ಆಗಸ್ಟ್ 15ರಿಂದ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ. ಇದಕ್ಕಾಗಿ ಜೂನ್ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅನಂತರ ಒಂದು ತಿಂಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಆಗಸ್ಟ್ 15ರಂದು ಮೊದಲ ಕಂತು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ, ಸರ್ಕಾರ ಈ ಯೋಜನೆಗೆ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅಥವಾ ನೇರವಾಗಿ ಕೂಡಾ ಅರ್ಜಿ ಸಲ್ಲಿಕೆ ಮಾಡಬಹುದು.
ಹಾಗಾದರೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ..? ಷರತ್ತುಗಳೇನು..?
1. ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರಬೇಕು.
2. ಯಜಮಾನಿ ಎಂದು ನಮೂದಿಸಿರುವ ಮಹಿಳೆಯ ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
3. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸುತ್ತದೆ.
4. ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಸೌಲಭ್ಯ ಸಿಗುವುದಿಲ್ಲ
6. ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ