ಗೃಹಲಕ್ಷ್ಮೀ ಅರ್ಜಿ ಪ್ರಕ್ರಿಯೆಗೆ ಚಾಲನೆ; ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು
ಬೆಂಗಳೂರು; ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.
ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿ ಸಲ್ಲಿಸಬಹುದು. ಫಲಾನುಭವಿಗಳ ಮೊಬೈಲ್‌ಗೆ ಮೆಸೇಜ್ ಬರಲಿದ್ದು, ಅದರಲ್ಲಿ ಸೂಚಿಸಿರುವ ಸ್ಥಳ ಹಾಗೂ ಸಮಯಕ್ಕೆ ಹೋಗಿ ನೋಂದಣಿ ಮಾಇಡಸಲು ಅವಕಾಶ ನೀಡಲಾಗಿದೆ. ನೋಂದಣಿ ಮಾಡಿಕೊಂಡವರಿಗೆ ಆಗಸ್ಟ್ 15ರ ನಂತರ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ನೀಡಲಾಗುತ್ತದೆ.