ಗೃಹಲಕ್ಷ್ಮೀ ಹಣ ಬರುತ್ತಿಲ್ಲವೇ..?; ಕೂಡಲೇ ಗ್ರಾಮ ಪಂಚಾಯತ್ ಸಂಪರ್ಕಿಸಿ
ಬೆಂಗಳೂರು; ಗೃಹಲಕ್ಷ್ಮೀ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದು ಅದಾಗಲೇ ನಾಲ್ಕು ತಿಂಗಳೇ ಕಳೆಯುತ್ತಿದೆ. ಆದರೂ ಕೆಲವು ಫಲಾನುಭವಿಗಳಿಗೆ ಇನ್ನೂ ಹಣ ಜಮೆಯಾಗುತ್ತಿಲ್ಲ. ಹೀಗಾಗಿ ಇದಕ್ಕೆ ಪರಿಹಾರ ನೀಡಲು ಸರ್ಕಾರ ಇಂದಿನಿಂದ ಮೂರು ದಿನಗಳ ವಿಶೇಷ ಶಿಬಿರವನ್ನು ಆಯೋಜಿಸಿದೆ. ಆಯಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟರೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬಹುದು.
ಮನೆಯ ಯಜಮಾನಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಇದಾಗಿದೆ. ಆದ್ರೆ ತಾಂತ್ರಿಕ ಸಮಸ್ಯೆಗಳಿಂದಾಗಿ ಕೆಲವರ ಅಕೌಂಟ್‌ಗಳಿಗೆ ಹಣ ಇನ್ನೂ ಜಮೆಯಾಗುತ್ತಿಲ್ಲ. ಹೀಗಾಗಿ ಇಂದಿನಿಂದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಮೂರು ದಿನಗಳ ಕಾಲ ಸ್ಥಳದಲ್ಲೇ ಸಮಸ್ಯೆ ನಿವಾರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಸ್ಯೆ ಇದ್ದವರು ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.
ಈ ಮೂರು ದಿನ ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ಈ ಶಿಬಿರ ನಡೆಯಲಿದೆ. ಇಲ್ಲಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಫಲಾನುಭವಿಗಳ ಬ್ಯಾಂಕ್ ಖಾತೆ ಸಮಸ್ಯೆ, ಹಣ ಜಮೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹಾರ ಮಾಡಿಕೊಡಲಾಗುತ್ತದೆ.