BengaluruPolitics

ಗುಜರಾತ್‍ನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು: ರಾಜ್ಯದ ಮೇಲೆ ಪರಿಣಾಮ – ಸಚಿವ ನಿರಾಣಿ

ಬೆಂಗಳೂರು; ಎಲ್ಲ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್‍ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್.ಆರ್ ನಿರಾಣಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ತಂತ್ರಗಾರಿಕೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದ್ದಾರೆ.

ನರೇಂದ್ರಮೋದಿ ಅವರ ಜನಪ್ರಿಯತೆಗೆ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶವೇ ಸಾಕ್ಷಿ. ಸ್ವಚ್ಛ, ಪಾರದರ್ಶಕ ಹಾಗೂ ಸರ್ವರ ವಿಕಾಸವೇ ಪಕ್ಷದ ಗೆಲುವಿಗೆ ಕಾರಣವಾಗಿದೆ. ಒಂದು ರಾಜ್ಯದಲ್ಲಿ ಸತತವಾಗಿ 7ನೇ ಬಾರಿ ಅಧಿಕಾರಕ್ಕೆ ಬರುವುದೆಂದರೆ ಸಾಮಾನ್ಯ ಮಾತಲ್ಲ. ಅಲ್ಲಿನ ಜನತೆ ಪಕ್ಷ ಮತ್ತು ನಾಯಕತ್ವದ ಮೇಲೆ ನಂಬಿಕೆ ಇಟ್ಟು ಹಿಂದಿನ ದಾಖಲೆಗಳನ್ನು ಮುರಿದು ಇಷ್ಟು ದೊಡ್ಡ ಮಟ್ಟದಲ್ಲಿ ಜನಾದೇಶ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ನಿರಾಣಿ ಹೇಳಿದರು.

Share Post