BengaluruHealth

H3N2 ಭೀತಿ ಹಿನ್ನೆಲೆ; ಇಂದಿನಿಂದ ಆರೋಗ್ಯ ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯ

ಬೆಂಗಳೂರು; H3N2  ಸೋಂಕಿನ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ತಜ್ಞ ವೈದ್ಯರ ಜೊತೆ ಚರ್ಚೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿ ನಡೆಸಿದರು. ಈ ಸೋಂಕಿನ ಬಗ್ಗೆ ಜನ ಆತಂಕಪಡುವ ಅಗತ್ಯವಿಲ್ಲ ಎಚ್ಚರಿಕೆ ವಹಿಸಿದರೆ ಸಾಕು ಎಂದು ಸಚಿವರು.

ಇನ್ನು ಆಸ್ಪತ್ರೆಯಲ್ಲಿ ಕೆಲಸ ಮಾಡುವ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇಂದಿನಿಂದಲೇ ಮಾಸ್ಕ್‌ ಧರಿಸೋದು ಕಡ್ಡಾಯ ಎಂದು ಸಚಿವ ಸುಧಾಕರ್‌ ಇದೇ ವೇಳೆ ತಿಳಿಸಿದರು. H3N2  ಸೋಂಕಿನ ಬಗ್ಗೆ ಎಲ್ಲರೂ ಗಾಬರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದೆವು. ತಜ್ಞರು ಗಾಬರಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದ್ರೆ ಮಕ್ಕಳು, ಗರ್ಭಿಣಿಯರು ಮುಂಜಾಗ್ರತೆ ವಹಿಸೋದು ಉತ್ತಮ ಎಂದು ಹೇಳಿದರು.

ಇನ್ನು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಮಾಸ್ಕ್‌ ಧರಿಸುತ್ತಿಲ್ಲ. ಎಲ್ಲ ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸೋದು ಇಂದಿನಿಂದ ಕಡ್ಡಾಯ, ಜೊತೆಗೆ ಇನ್ ಫ್ಲ್ಯೂಯೆಂಜಾಗೆ ವ್ಯಾಕ್ಸಿನ್ ತೆಗೆದುಕೊಳ್ಳುವಂತೆಯೂ ಆರೋಗ್ಯ ಸಿಬ್ಬಂದಿಗೆ ಸಚಿವರು ಸೂಚಿಸಿದ್ದಾರೆ.

 

ವಾಣಿ ವಿಲಾಸ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿನ ಟೆಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಕೊವಿಡ್‌ ಟೆಸ್ಟ್‌ ರೀತಿಯಲ್ಲಿ ಇದರ ಟೆಸ್ಟ್‌ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.  ಜನರು ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡೋದು ಬೇಡ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅನಗತ್ಯವಾಗಿ ಹೊರಗೆ ಓಡಾಡಬೇಡಿ ಎಂದು ಸಚಿವ ಸುಧಾಕರ್‌ ಸೂಚನೆ ನೀಡಿದ್ದಾರೆ.

Share Post