HARSHA MURDER CASE: ಬೆಂಗಳೂರಿನಲ್ಲಿ ಮೂವರು ಆರೋಪಿಗಳು ವಶಕ್ಕೆ
ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ರಾತ್ರಿ ನಡೆದ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಪೊಲೀಸರು ಬೆಂಗಳೂರಿನಲ್ಲೂ ತಲಾಶ್ ನಡೆಸಿದ್ದಾರೆ. ಇಲ್ಲಿನ ಜೆಜೆ ನಗರದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಹಾಗೂ ಶಿವಮೊಗ್ಗ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಚಿಕ್ಕಮಗಳೂರು ಬೀರೂರಿನಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದ ಬೆನ್ನಲ್ಲೇ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಂದರೆ ಹರ್ಷ ಕೊಲೆಗೆ ಬೆಂಗಳೂರು ಲಿಂಕ್ ಇರೋದು ಖಾತ್ರಿಯಾಗಿದೆ. ಹೀಗಾಗಿ ಹರ್ಷ ಕೊಲೆ ಯಾಕೆ ಆಯಿತು..? ಎಂಬುದರ ಬಗ್ಗೆ ಹಲವು ಅನುಮಾನಗಳು ಮೂಡಿವೆ.