HARSHA MURDER CASE: ಆದಷು ಬೇಗ ಆರೋಪಿಗಳ ಬಂಧನ ; ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ
ಬೆಂಗಳೂರು; ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡನೀಯ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಆತಂಕದ ವಿಚಾರ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದಿದ್ದಾರೆ.
ಪೊಲೀಸರು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ದುಷ್ಕರ್ಮಿಗಳನ್ನು ರಾಜ್ಯದಲ್ಲಿ ಮಟ್ಟ ಹಾಕಬೇಕು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.