HARSHA MURDER CASE: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೊಲೆ; ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು; ಅನ್ಯಕೋಮಿನ ಕೆಲ ಗೂಂಡಾಗಳೇ ಹರ್ಷನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದೆ. ಈಗ ಅರೆಸ್ಟ್ ಆಗಿರುವವರು ಕೂಡಾ ಅವರೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಥಳೀಯರು ಹಾಗೂ ಶಿವಮೊಗ್ಗ ಎಸ್ಪಿ ಹೇಳಿದ ಮಾತನ್ನು ನಾನು ಹೇಳಿದ್ದೆ. ಯಾರು ಕೊಲೆ ಮಾಡಿದ್ದಾರೆಂದು ಗೊತ್ತಿದ್ದರಿಂದ ನಾನು ಹಾಗೆ ಹೇಳಿದ್ದೆ. ಈಗ ಅದು ನಿಜ ಆಗಿದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.