ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆ; ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತಿರುವ ಸಚಿವರ ಜಿಲ್ಲೆಯಲ್ಲೇ ಕೊಲೆ ನಡೆದಿದೆ ಎಂದರೆ ಏನರ್ಥ..?. ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಲೇಬೇಕು. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.