Bengaluru

ಈಗಿನ ವಿದ್ಯಾರ್ಥಿಗಳಿಗೆ ಮಾರಲ್ ಸೈನ್ಸ್ ಬಗ್ಗೆ ಹೆಚ್ಚಿನ ಒಲವಿಲ್ಲ; ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು: ಈಗಿನ ವಿದ್ಯಾರ್ಥಿಗಳಿಗೆ ಮಾರಲ್ ಸೈನ್ಸ್ ಬಗ್ಗೆ ಹೆಚ್ಚಿನ ಒಲವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಮಾರಲ್ ಸೈನ್ಸ್ ಬೋಧನೆ ಬೇಕು ಎನ್ನುವ ಬೇಡಿಕೆ ಇದೆ. ಆದ್ರೆ ಮಕ್ಕಳಿಗೆ ಇದರ ಬಗ್ಗೆ ಆಸಕ್ತಿ ಕಾಣುತ್ತಿಲ್ಲ ಎಂದು ಹೇಳಿದರು.

ಇತ್ತೀಚಿನ ಮಕ್ಕಳಲ್ಲಿ ಮಾರಲ್ ಸೈನ್ಸ್ ಬಗ್ಗೆ ಹೆಚ್ಚಿನ ಒಲವಿಲ್ಲ. ಹೀಗಾಗಿ ಪ್ರಾಥಮಿಕ ಶಾಲೆಯಿಂದಲೇ ಮಕ್ಕಳಲ್ಲಿ ಈ ಬಗೆಗಿನ ಆಸಕ್ತಿ ಮೂಡಿಸುವ ಅಗತ್ಯವಿದೆ. ಈ ಬಗ್ಗೆ ಮುಂದೆ ಚರ್ಚೆ ಮಾಡಿ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಮಾಡಲಾಗುತ್ತೆ. ಪಠ್ಯ ಇನ್ನೂ ಪುಸ್ತಕ ರಚನಾ ಸಮಿತಿ ಇದೆ, ಅವರ ಅಭಿಪ್ರಾಯವೂ ಮುಖ್ಯವಾಗುತ್ತೆ. ಮುಂದಿನ ಸಾಲಿನಿಂದ ಬೇಕಿದ್ದರೆ ಈ ಬಗ್ಗೆ ಯೋಚನೆ ಮಾಡೋಣ ಎಂದು ಹೇಳಿಕೆ ನೀಡಿದ್ದಾರೆ.

Share Post