ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲಿನ 5 ಪ್ರಕರಣ ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದಯ ಐದು ಪ್ರಕರಣಗಳನ್ನು ರದ್ದು ಮಾಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೊರೊನಾ ಸಮಯದಲ್ಲಿ ಕಾನೂನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆಂದು ಡಿ.ಕೆ.ಶಿವಕುಮಾರ್ ವಿರುದ್ಧ ಐದು ಕೇಸ್ ದಾಖಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಐದೂ ಪ್ರಕರಣಗಳನ್ನು ರದ್ದುಪಡಿಸಿ ಆದೇಶ ನೀಡಿದೆ.
ಕೊರೊನಾ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸಲಾಗಿತ್ತು. ಮೇಕೆದಾಟಿನಿಂದ ಬೆಂಗಳೂರಿನವರೆಗೂ ಎರಡು ಹಂತದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಈ ವೇಳೆ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಪೊಲೀಸರು ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೊರೆಹೋಗಿದ್ದರು. ಡಿಕೆಶಿ ಅರ್ಜಿ ಪುರಸ್ಕರಿಸಿದ ಕೋರ್ಟ್, ಐದೂ ಕೇಸ್ಗಳನ್ನು ರದ್ದು ಮಾಡಿ ಆದೇಶ ಮಾಡಿದೆ.