ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣವನ್ನು ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಮಾಜಿ ಶಾಸಕ ಮಾಡಾಳ್ ವಿರೂಪಾಪಕ್ಷಪ್ಪ ಕಾನೂನು ಸಂಕಷ್ಟದಿಂದ ಪಾರಾಗಿದ್ದಾರೆ. ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಮಾಡಿದೆ.
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ ಎಂದು ಮಾಡಾಳ್ ಪರ ವಕೀಲರು ವಾದಿಸಿದ್ದರು. ಇದನ್ನು ಹೈಕೋರ್ಟ್ ಪುರಸ್ಕರಿಸಿದೆ. ಮಾರ್ಚ್ 2ರಂದು ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಕೆಎಸ್ಡಿಎಲ್ಗೆ ಕಚ್ಚಾವಸ್ತು ಪೂರೈಸುವ ಗುತ್ತಿಗೆ ಪಡೆದಿದ್ದ ಶ್ರೇಯಾಸ್ ಕಶ್ಯಪ್ ಎಂಬುವರಿಂದ 40 ಲಕ್ಷ ರೂ, ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿತ್ತು.
ಅಲ್ಲದೇ ಪ್ರಶಾಂತ್ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರೂ. ಲಂಚದ ಹಣ ಹಾಗೂ ವಿರೂಪಾಕ್ಷಪ್ಪ ಅವರ ಮಲಗುವ ಕೋಣೆಯಲ್ಲಿ 6.10 ಕೋಟಿ ರೂ, ನಗದು ಹಣ ಪತ್ತೆಯಾಗಿತ್ತು.