Bengaluru

ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಹೆಚ್ಡಿಕೆ; ಪರ್ಸೆಂಟೇಜ್‌ ವ್ಯವಹಾರದ ಪಿತಾಮಹರಂತೆ ಸಿದ್ದು..!

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆಯೇ ಸರಣಿ ಟ್ವೀಟ್‌ ಮಾಡಿರುವ ಅವರು, ಸಿದ್ದರಾಮಯ್ಯರನ್ನು ಪರ್ಸೆಂಟೇಜ್‌ ವ್ಯವಹಾರದ ಪಿತಾಮಹ ಎಂದು ಜರಿದಿದ್ದಾರೆ.  ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ಧಹಸ್ತನೇ, ನೀವೇ ‘ಪರ್ಸಂಟೇಜ್ ವ್ಯವಹಾರದ ಪಿತಾಮಹ’.  ಆಪ್ತ ಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ‘ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? ಎಂದು ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ. 

 

ಹೆಚ್ಡಿಕೆ ಟ್ವೀಟ್‌ನಲ್ಲಿ ಬರೆದಿರುವುದೇನು..? ಇಲ್ಲಿದೆ ಮಾಹಿತಿ..

 ʻಸುಳ್ಳು ಶೂರ, ಸಿದ್ಧಸೂತ್ರಧಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ‘ಜೆಡಿಎಸ್ ಜ್ವರ’ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ‘ಸತ್ಯಭಕ್ಷ’ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಿಗೆ ಮತ್ತೆ ಹುಚ್ಚು ಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ.ʼ

 

‘ಆಪರೇಷನ್ ಕಮಲ ಹಣದ ಕಥಾಪ್ರಸಂಗ’ ರೋಚಕ ‘ಸಿದ್ಧಸಿನಿಮಾ’ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ. ಧೈರ್ಯವಿದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿʼ

ʻಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು?. ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ?, ಆ ಹಣ ಏನಾಯಿತು?, ಎಲ್ಲಿಗೆ ಹೋಯಿತು?, ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ ಜೇಬಿಗಿಳಿಸಿ ಜಲ್ಸಾ ಮಾಡಿದಿರಾ?. ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ ಕೃಷ್ಣನ ಲೆಕ್ಕದಲ್ಲಿಯಾ?ʼ

 

ʻಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ #ಸುಳ್ಳುರಾಮಯ್ಯ?. ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ?ʼ

ʻಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ. ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌’ಮೆಂಟ್‌’ವಾದಿ!. ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ. ನಿಮ್ಮ ರಾಜಕೀಯ ಲೀಲೆಗಳು ಒಂದಾ, ಎರಡಾ?. 2008-2009ರಲ್ಲಿ ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ?. ಹೆಸರಿನಲ್ಲಿ ‘ರಾಮ’ ಉಂಡ ಮನೆಗೆ ಪಂಗನಾಮ. ಸ್ವಯಂ ಘೋಷಿತ ಸತ್ಯಹರಿಶ್ಚಂದ್ರʼ

 

Share Post