BengaluruPolitics

ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ಗರಂ

ಬೆಂಗಳೂರು; ರಾಜ್ಯ ನೀರಾವರಿಗೆ ಮಣ್ಣಿನ ಮಕ್ಕಳಿಂದ ಅನ್ಯಾಯವಾಗಿದೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ಅವರು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದರು.‌ ನೆಲಮಂಗಲದಲ್ಲಿ ನಡೆದ ಸಭೆಯೊಂದರಲ್ಲಿ ಭಾಷಣ ಮಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ತಪ್ಪು ಹೇಳಿಕೆ ನೀಡಿದ್ದಾರೆ. ಹಸಿ ಸುಳ್ಳುಗಳನ್ನು ಹೇಳಿದ್ದಾರೆ. ಮಣ್ಣಿನ ಮಕ್ಕಳಿಂದ‌ ಕಾವೇರಿಗೆ ದ್ರೋಹ ಆಗಿದೆ ಅಂತ ಹೇಳಿದ್ದಾರೆ. ಆದರೆ, ತಮ್ಮಿಂದ ಏನು ಆಗಿದೆ ಎನ್ನುವುದನ್ನು ಹೇಳಬೇಕಿತ್ತು. ಆದರೆ, ಬರೀ ಸತ್ಯವನ್ನೇ ಹೇಳಿ ಜನರ ಹಾದಿ ತಪ್ಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ಇವರಿಂದ ನೀರಾವರಿಗೆ ನ್ಯಾಯ ಸಿಕ್ಕಿದ್ದು ಏನೂ ಇಲ್ಲ. ಆಗಿರುವುದಿಲ್ಲ ಅನ್ಯಾಯವೇ. ಹಿಂದೆ ಮುಖ್ಯ ಮಂತ್ರಿಯಾಗಿದ್ದ ಧರ್ಮಸಿಂಗ್, ಉಪ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರನ್ನು ಕಾವೇರಿ ವಿಷಯದಲ್ಲಿ ದಾರಿ ತಪ್ಪಿಸಿದ್ದು ಇದೇ ವೀರಪ್ಪ ಮೊಯಿಲಿ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

Share Post