Bengaluru

ಸಚಿವರು ಹಿಟಾಚಿಯಲ್ಲಿ ಹಣ ಬಗೆಯೋದನ್ನು ನಿಲ್ಲಿಸಲಿ; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಕಳೆದ 15 ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉನ್ನತ ಮಟ್ಟದ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ರಾಜರಾಜೇಶ್ವರಿ, ಯಶವಂತಪುರ ಸೇರಿದಂತೆ ನಗರದಲ್ಲಿ ಎಷ್ಟು ಹಣ ಲೂಟಿ ಆಗಿದೆ ಎನ್ನುವುದು ನನಗೆ ಗೊತ್ತಿದೆ. ಹಿಟಾಚಿಯಲ್ಲಿ ಹಣವನ್ನು ಬಗೆಯೋದನ್ನು ಸಚಿವರು ನಿಲ್ಲಿಸಲಿ. ಸಚಿವರಾದ ಭೈರತಿ ಬಸವರಾಜ, ಮುನಿರತ್ನ, ಗೋಪಾಲಯ್ಯ, ಸೋಮಶೇಖರ್ ಮಳೆಯಿಂದ ಸಂಕಷ್ಟಕ್ಕೆ ಒಳಗಾದ ಜನರ ಕೆಲಸ ಮಾಡಲಿ ಕಿಡಿಕಾರಿದರು.

ಈ ಸಚಿವರುಗಳ ಕ್ಷೇತ್ರಗಳಿಗೆ ಎಷ್ಟು ಹಣ ಬಿಡುಗಡೆಯಾಗಿದೆ. ಅದನ್ನು ತಿಳಿದುಕೊಳ್ಳುವ ಹಕ್ಕು ಜನರಿಗೆ ಇದೆ. ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ದಾಸರಳ್ಳಿ ವಿಧಾನಸಭಾ ವಿಧಾನಸಭಾ ಕ್ಷೇತ್ರದ ನೆಲಗದರನಹಳ್ಳಿ ರಸ್ತೆಯ ರುಕ್ಮಿಣಿ ನಗರ, ಸಿದ್ಧಾರ್ಥ ನಗರ ಕೊಳಗೇರಿ, ಬಸಪ್ಪನ ಕಟ್ಟೆ, ಚಿಕ್ಕಬಾಣಾವರ ಮುಂತಾದ ಮಳೆ ಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಬೆಳಗ್ಗೆ 8 ಗಂಟೆಯಿಂದ 12.30 ವರೆಗೂ ದಾಸರಹಳ್ಳಿ ಕ್ಷೇತ್ರದಲ್ಲಿ ಸಂಚಾರ ಮಾಡಿದ ಮಾಜಿ ಮುಖ್ಯಮಂತ್ರಿಗಳು, 28 ಕ್ಷೇತ್ರಗಳಿಗೆ ಎಷ್ಟು ಹಣವನ್ನು 15 ವರ್ಷಗಳಲ್ಲಿ ಬಿಡುಗಡೆ ಮಾಡಿದ್ದಾರೆ ಮಾಹಿತಿ ಪಡೆಯುತ್ತೇನೆ. ಜನರ ಬದುಕಿನ ಪ್ರಶ್ನೆ. ಇದರಲ್ಲಿ ರಾಜಕಾರಣ ನಾನು ಮಾಡ್ತಿಲ್ಲ ಎಂದು ಹೇಳಿದರು.

Share Post