Bengaluru

ಅತಿಥಿ ಉಪನ್ಯಾಸಕರ ಪರ ನಿಂತ ಹೆಚ್‌ಡಿಕೆ ಹೇಳಿದ್ದೇನು..?

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯದ ಅತಿಥಿ ಉಪನ್ಯಾಸಕರ ಪರ ನಿಂತಿದ್ದಾರೆ. ಅವರ ವೇತನ ಪರಿಷ್ಕರಣೆ ಬಗ್ಗೆ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು, ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರಣಿ ಟ್ವೀಟ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆಯಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? ಇದು ನಿಮಗೆ ನ್ಯಾಯ ಅನಿಸುತ್ತಾ ಎಂದು ಪ್ರಶ್ನಿಸಿದ್ದಾರೆ.

ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಟ್ವಿಟ್ಟರ್‌ನಲ್ಲಿ ಆಗ್ರಹಿಸಿದ್ದಾರೆ.

 

 

Share Post