ಕಲಿಸುವ ಗುರುವು ದಿಕ್ಕಿಲ್ಲದೆ ಬೀದಿಯಲ್ಲಿ ನಿಂತಿದ್ದಾನೆ: ಇದ್ಯಾವ ಸೀಮೆ ಆಡಳಿತ..?
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಬಿಜೆಪಿಯವರ ಸ್ವಗುಣಗಾನ ನಿಲ್ಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಕ್ಕೆ 6 ತಿಂಗಳು ತುಂಬಿದ ಮೇಲೆ ಸಾಧನೆಗಳ ಪುಸ್ತಕವೂ ಹೊರಬಂತು, ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್ʼನಲ್ಲಿ ಅದ್ಧೂರಿ ಕಾರ್ಯಕ್ರಮವೂ ನಡೆಯಿತು. ಬಣ್ಣಬಣ್ಣದ ಜಾಹೀರಾತುಗಳ ಮೂಲಕ ಮಾಡದ ಕೆಲಸಗಳ ಬಗ್ಗೆ ಕೊಚ್ಚಿಕೊಂಡಿದ್ದೂ ಆಯಿತು. ಸ್ವ-ಗುಣಗಾನ ಇನ್ನೂ ನಿಂತಿಲ್ಲ.
ಸರಕಾರಕ್ಕೆ 6 ತಿಂಗಳು ತುಂಬಿದ ಮೇಲೆ ಸಾಧನೆಗಳ ಪುಸ್ತಕವೂ ಹೊರಬಂತು, ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್ʼನಲ್ಲಿ ಅದ್ಧೂರಿ ಕಾರ್ಯಕ್ರಮವೂ ನಡೆಯಿತು. ಬಣ್ಣಬಣ್ಣದ ಜಾಹೀರಾತುಗಳ ಮೂಲಕ ಮಾಡದ ಕೆಲಸಗಳ ಬಗ್ಗೆ ಕೊಚ್ಚಿಕೊಂಡಿದ್ದೂ ಆಯಿತು. ಸ್ವ-ಗುಣಗಾನ ಇನ್ನೂ ನಿಂತಿಲ್ಲ. 1/6 pic.twitter.com/XWI6XpReIs
— H D Kumaraswamy (@hd_kumaraswamy) February 3, 2022
9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತಾಗಿದೆ ಎಂದು @prajavani ವರದಿ ಮಾಡಿದೆ. ಒಳ್ಳೆಯದು ಮಾಡಿ ಎಂದು ಅಲವತ್ತುಕೊಂಡರೆ, ಏಕಾಎಕಿ ಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಯಾವ ಸೀಮೆಯ ಆಡಳಿತ?
ಭಾರತವು ವಿಶ್ವಗುರು ಆಗಬೇಕು ಎನ್ನುತ್ತೀರಿ, ರಾಷ್ಟ್ರೀಯ ಶಿಕ್ಷಣದ ಮೂಲಕ ದೇಶವನ್ನು ಜ್ಞಾನಕಾಶಿ ಮಾಡುತ್ತೇವೆ ಎಂದು ಹೇಳುತ್ತೀರಿ, ಕರ್ನಾಟಕವು ಭಾರತದ ಶೈಕ್ಷಣಿಕ ರಾಜಧಾನಿ ಆಗಬೇಕು ಎನ್ನುತ್ತೀರಿ. 9,881 ಅತಿಥಿ ಉಪನ್ಯಾಸಕರನ್ನು ಕಿತ್ತೊಗೆಯುವ ಮೂಲಕ ಇದನ್ನು ಸಾಧನೆ ಮಾಡಲಾಗುತ್ತದೆಯೇ?
ದೇಶ ಕಟ್ಟುವುದರಲ್ಲಿ ಶಿಕ್ಷಣವೇ ನಿರ್ಣಾಯಕ. ಆ ಶಿಕ್ಷಣ ವ್ಯವಸ್ಥೆಗೆ ಗುರುವೇ ನಾಯಕ. ಆದರೆ ಇಂದು ಕಲಿಸುವ ಗುರುವು ದಿಕ್ಕಿಲ್ಲದೆ ಬೀದಿಯಲ್ಲಿ ನಿಂತಿದ್ದಾನೆ. ಸರಕಾರ ಹೇಳುವುದು ಒಂದು, ಮಾಡುವುದು ಇನ್ನೊಂದು. ಸರಕಾರಿ ಉನ್ನತ ಶಿಕ್ಷಣ ವ್ಯವಸ್ಥೆಯ ಕತ್ತು ಹಿಸುಕಿ, ವ್ಯವಸ್ಥಿತವಾಗಿ ಖಾಸಗಿ ವಲಯವನ್ನು ಬಲಪಡಿಸುವ, ಮಕ್ಕಳು-ಪೋಷಕರನ್ನು ಖಾಸಗಿಯವರ ಗುಲಾಮರನ್ನಾಗಿಸುವ ಹುನ್ನಾರ ಇದರ ಹಿಂದೆ ಇದೆಯಾ? ಎನ್ನುವ ಅನುಮಾನ ಬರುತ್ತಿದೆ.
ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ, ಹಿರಿತನ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗಾದರೆ, ಇವೆರಡೂ ಅರ್ಹತೆಗಳು ಇಲ್ಲದಿದ್ದವರನ್ನು ಇಷ್ಟು ದಿನ ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಂಡಿದ್ದು ಯಾಕೆ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇತ್ತಾ?
ಆರೇ ತಿಂಗಳಲ್ಲಿ ಅಭಿವೃದ್ಧಿ ಹರಿಕಾರರಾಗುವುದು ಎಂದರೆ ಇದೇನಾ? ಕನಿಷ್ಠ ಸರಕಾರ, ಗರಿಷ್ಠ ಆಡಳಿತ ಎಂದರೆ ನಿರುದ್ಯೋಗ ಸೃಷ್ಟಿಯಾ? ಸರಕಾರ ಇರುವುದು ಸಬೂಬು ಹೇಳುವುದಕ್ಕಲ್ಲ, ಕಾರಣ ಹೇಳಿ ಪಲಾಯನ ಮಾಡುವುದಕ್ಕಲ್ಲ. ನ್ಯಾಯ ಕೊಡುವ ಬಗ್ಗೆ ಕ್ರಮ ವಹಿಸಬೇಕು. ಕೂಡಲೇ @BSBommaiಅವರು ಈ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.