BengaluruPolitics

ಡಿ.ಕೆ.ಶಿವಕುಮಾರ್ ಸಿಎಂ ಆಗುವುದಾದರೆ ಜೆಡಿಎಸ್ ಬೆಂಬಲ; ಹೆಚ್ಡಿಕೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್​ ನಾಳೆ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಎಂದು ಓಪನ್ ಆಫರ್​ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

Share Post