BengaluruPolitics

ರಾಜೀನಾಮೆ ಕೊಟ್ಟಿಲ್ಲ, ಹೇಳಿಕೆ ತಪ್ಪಾಗಿ ಅರ್ಥೈಸಿದ್ದಾರೆ; ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರು; ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾನು ರಾಜೀನಾಮೆ ಕೊಟ್ಟಿಲ್ಲ. ನೈತಿಕೆ ಹೊಣೆ ಹೊರುತ್ತೇನೆ ಎಂದು ಹೇಳಿದ್ದೆ ಅಷ್ಟೇ ಎಂದು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದಿರುವ ಕಟೀಲ್‌, ನಾನು ಬಳ್ಳಾರಿಯಲ್ಲಿದ್ದಾಗ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರಕಟಿಸಿರುವ ಕುರಿತು ಮಾಧ್ಯಮದವರು ಪ್ರಶ್ನೆ ಕೇಳಿದರು. ಆಗ ನಾನು ಸೋಲಿನ ನೈತಿಕ ಹೊಣೆಯನ್ನು ಹೊರುತ್ತೇನೆ. 4 ವರ್ಷಗಳಿಂದ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದೆ. ಆದ್ರೆ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಹೇಳಿದ್ದಾರೆ.

Share Post