ಸಿಎಸ್‌ಆರ್ ಫಂಡ್ ವಿಚಾರವಾಗಿ ಮಾತಾಡಿದ್ದಾರೆ; ಯತೀಂದ್ರ ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಹಾಗೂ ಅಧಿಕಾರಿ ಮಹದೇವ್ ಜೊತೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವಿಡಿಯೋ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಹೀಗಿರುವಾಗಲೇ ಮಗನ ವಿಡಿಯೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು, ಯತೀಂದ್ರ ಅವರು ಯಾವುದೇ ವರ್ಗಾವಣೆ ಬಗ್ಗೆ ಮಾತನಾಡಿಲ್ಲ. ಅವರು ಸಿಎಸ್‌ಆರ್ ಫಂಡ್ ಬಗ್ಗೆ ಮಾತನಾಡಿದ್ದಾರೆ. ಯತೀಂದ್ರ ಹೇಳಿದ್ದು ಸಿಎಸ್‌ಆರ್ ಲಿಸ್ಟ್ ಬಗ್ಗೆ. ಶಾಲಾ ಕಟ್ಟಡಗಳನ್ನು ಸಿಎಸ್‌ಆರ್ ಫಂಡ್ನಿಂದ ರಿಪೇರಿ ಮಾಡಿಸಲಾಗುತ್ತಿದೆ. ಈ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.