ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಮುಖ್ಯ ಶಿಕ್ಷಕಿ ಸಸ್ಪೆಂಡ್
ಬೆಂಗಳೂರು; ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಪ್ರಕರಣ ಸುದ್ದಿಯಾಗಿತ್ತು. ಇದೀಗ ಸರ್ಕಾರ ಕ್ರಮ ಕೈಗೊಂಡಿದೆ.
ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಧಿಕೃತವಾಗಿ ಈ ಆದೇಶ ಹೊರಡಿಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ್ದರು. ಈ ಪ್ರಕರಣ ಕೂಡಾ ದೊಡ್ಡ ಸದ್ದು ಮಾಡಿತ್ತು.
ಇದೀಗ ಬೆಂಗಳೂರಿನಲ್ಲಿ ಮಕ್ಕಳ ಕೈಯಿಂದ ಶೌಚಾಲಯ ಕ್ಲೀನ್ ಮಾಡಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.