BengaluruHealth

ಆಟೋ ಓಡಿಸುತ್ತಿದ್ದಾಗಲೇ ಹೃದಯಾಘಾತ; ಡ್ರೈವರ್‌ ಸಾವು..!

ಬೆಂಗಳೂರು; ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಿದೆ. ಇಂದು ಬೆಂಗಳೂರಿನಲ್ಲಿ ಇಂತಹದ್ದೇ ಆದ ಹೃದಯವಿದ್ರಾವಕ ಘಟನೆ ನಡೆದಿದೆ.

ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ಆಟೋ ಓಡಿಸುತ್ತಿದ್ದಾಗ ಚಾಲಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. 53 ವರ್ಷದ ತಿಮ್ಮೇಶ್‌ ಎಂಬುವವರೇ ಸಾವನ್ನಪ್ಪಿದ ದುರ್ದೈವಿ. ತಿಮ್ಮೇಶ್‌ ಅವರು ಆಟೋ ಓಡಿಸುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಟೋ ನಿಲ್ಲಿಸಿದ ಅವರು, ಎದೆ ಮೇಲೆ ಕೈ ಇಟ್ಟುಕೊಂಡೇ ಆಟೋ ಇಳಿದುಬರುತ್ತಾರೆ. ಏನಕ್ಕೋ ನೋಯುತ್ತಿದೆ ಎಂದುಕೊಂಡು ಅವರು ಅಲ್ಲೇ ಇದ್ದ ಟೀ ಅಂಗಡಿಯಲ್ಲಿ ಟೀ ಕುಡಿಯಲು ಹೋಗುತ್ತಾರೆ. ಆದ್ರೆ ಕೆಲ ಹೆಜ್ಜೆ ಹೋಗುತ್ತಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಿಮ್ಮೇಶ್‌ ಅವರು ಮಂಡ್ಯದವರಾಗಿದ್ದು, ಬದುಕು ಕಟ್ಟಿಕೊಳ್ಳುವುದಕ್ಕಾಗಿ ಬೆಂಗಳೂರಿಗೆ ಬಂದು ಆಟೋ ಓಡಿಸುತ್ತಾ ಜೀವನ ಸಾಗಿಸುತ್ತಿದ್ದರು.

 

Share Post