Bengaluru

ರಾಜ್ಯದಲ್ಲಿ ಮುಂದುವರೆದ ಮಳೆ; ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು; ರಾಜ್ಯದಲ್ಲಿ ರಣಮಳೆ ಮುಂದುವರೆದಿದೆ. ಇದ್ರಿಂದಾಗಿ ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಬೆಳೆ ಹಾನಿ, ಮನೆ ಹಾನಿಯಾಗಿದೆ. ಕೆಲವೆಡೆ ರಸ್ತೆಗಳೇ ಕೊಚ್ಚಿಹೋಗಿವೆ. ಹೀಗಾಗಿ ಇಂದೂ ಕೂಡಾ ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಧಾರವಾಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗ​ಳಲ್ಲಿ ಮುನ್ನೆ​ಚ್ಚ​ರಿಕಾ ಕ್ರಮ​ವಾಗಿ ಶುಕ್ರವಾರ ಶಾಲೆ​ಗ​ಳಿಗೆ ರಜೆ ಘೋಷಿ​ಸ​ಲಾ​ಗಿ​ದೆ. ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ 1ರಿಂದ 10ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಹಿಸಿ ರಜೆ ನೀಡಲಾಗಿದೆ. ಮಳೆಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮಕ್ಕಳಿಗೆ ಶಾಲೆಗೆ ತೆರಳಲು ತೊಂದರೆಯಾಗುತ್ತಿದೆ.

    ಜಿಲ್ಲಾದ್ಯಂತ ಇಂದೂ ಕೂಡ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಘೋಷಣೆ ಮಾಡಿದ್ದಾರೆ. ಶುಕ್ರವಾರವೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ ಕಾರಣ ರಜೆ ನೀಡಲಾಗಿದೆ. ಈಗಾಗಲೇ ಮಳೆಯಿಂದ ನಗರದ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ ಆಯಾ ಬಡಾವಣೆಯಲ್ಲಿ ಸರ್ಕಾರಿ ಶಾಲೆಯಲ್ಲಿಯೇ ಗಂಜಿಕೇಂದ್ರ ತೆರೆಯಲಾಗಿದೆ. ಗುರುವಾರವೂ ಕೂಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

Share Post