Bengaluru

ಸೆಪ್ಟೆಂಬರ್‌ 12ರವರೆಗೂ 13 ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ಬೆಂಗಳೂರು; ರಾಜ್ಯದಲ್ಲಿ ಕರಾವಳಿ ಸೇರಿ ಒಟ್ಟು 13 ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 12ರವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.. ರಾಜ್ಯದ ಬಹುತೇಕ ಭಾಗಗಳಲ್ಲಿ ಈಗಾಗಲೇ ಚೆನ್ನಾಗಿ ಮಳೆಯಾಗಿದೆ.. ರಾಜ್ಯದ ಅರ್ಧದಷ್ಟು ಜಿಲ್ಲೆಗಳಲ್ಲಿ ಇನ್ನೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಸೆಪ್ಟೆಂಬರ್‌ 12ರವರೆಗೆ ನಿರಂತರವಾಗಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ..
ಬೀದರ್‌, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲೂ ಒಂದು ವಾರದ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.. ಈಗಾಗಲೇ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ.. ಈ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ..
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ..

Share Post