Bengaluru

ಮುಂದಿನ 24 ಗಂಟೆಯಲ್ಲಿ 6 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌

ಬೆಂಗಳೂರು; ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೀದರ್‌, ಕಲಬುರಗಿ, ಯಾದಗಿರಿ, ದಕ್ಷಿಣ ಕನ್ನಡ, ರಾಮನಗರ ಹಾಗೂ ತುಮಕೂರಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಆರು ಜಿಲ್ಲೆಗಳಲ್ಲದೆ ಮುಂದಿನ ಏಳು ದಿನಗಳ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಬಿರುಗಾಳಿ ಸಹಿತ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಂದು ವಾರದ ಕಾಲ ಮಳೆಯಾಗಲಿದೆ. ಗುಡುಗು, ಬಿರುಗಾಳಿ ಸಹಿತ ಮಳೆಯಾಗುವುದರಿಂದ ಹೊರಹೋಗುವವರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

Share Post