Bengaluru

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ; ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದೆ. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಮಳೆ ಹೆಚ್ಚಾಗುತ್ತಿದೆ. ಮಲೆನಾಡು ಭಾಗ, ಉತ್ತರ ಒಳನಾಡು ಪ್ರದೇಶ, ಕರಾವಳಿ ಜಿಲ್ಲೆಗಳು, ಬೆಂಗಳೂರು ಸುತ್ತಮುತ್ತಲ ಭಾಗಗಳಲ್ಲಿ ಸುಮಾರು ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುತ್ತದೆ ಎಂದು ಹೇಳಲಾಗಿದೆ.

ಬೆಂಗಳೂರು ನಗರದಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸಿಸುವವರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Share Post