ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್
ಬೆಂಗಳೂರು; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದರಿಂದ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ವಿಜಯನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡಿದರು. ಟ್ರಾಫಿಕ್ ಜಾಮ್ ಉಂಟಾಗಿದ್ದನ್ನು ನೋಡಬಹುದು.
ನಾಳೆ ಹಾಗೂ ನಾಳಿದ್ದು ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ಮೇ 11ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಪಶ್ಚಿಮ ಘಟ್ಟ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 10ರಂದು ಪಶ್ಚಿಮ ಘಟ್ಟ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಿಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.