Bengaluru

ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು; ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಗದಗ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯನಗರ ಜಿಲ್ಲೆಯಲ್ಲೂ ಮಳೆಯಾಗುವ ನಿರೀಕ್ಷೆ ಇದೆ.

 

Share Post