Bengaluru

ಇನ್ನೂ ಎರಡು ದಿನ ಇರಲಿದೆ ಭಾರಿ ಮಳೆ; ಮಧ್ಯಾಹ್ನದ ನಂತರ ಬೆಂಗಳೂರಲ್ಲಿ ವರುಣಾರ್ಭಟ!

ಬೆಂಗಳೂರು; ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ನಿರಂತರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವರುಣ ಆರ್ಭಟಿಸಲಿದ್ದಾನೆ.

ಆಂಧ್ರಪ್ರದೇಶದ ರಾಯಲಸೀಮೆಯಿಂದ ತಮಿಳುನಾಡಿನ ಕನ್ಯಾಕುಮಾರಿಯವರೆಗೆ ಧಾರಾಕಾರ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಚಾಮರಾಜನಗರ, ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

 

Share Post