BengaluruPolitics

ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಹೈಕಮಾಂಡ್‌ ಬುಲಾವ್‌

ಬೆಂಗಳೂರು; ಬೆಂಗಳೂರಿನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಬಿಸಿಬಿಸಿ ಮಾತುಕತೆ ನಡೆದ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಖರ್ಗೆಯವರ ಹೆಗಲಿಗೆ ಹಾಕಲು ಒಕ್ಕೊರಲಿ ನಿರ್ಧಾರ ಮಾಡಲಾಗಿದೆ.

ಇದರ ನಡುವೆ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ ಎನ್ನಲಾಗಿದೆ. ನಾಳೆ ಬೆಳಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅವರು ಕೂಡಾ ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರೇ ಇಬ್ಬರೂ ನಾಯಕರನ್ನು ಸಮಧಾನಪಡಿಸಿ, ಸಿಎಲ್‌ಪಿ ನಾಯಕನ ಆಯ್ಕೆ ಮಾಡಲಿದ್ದರೆ ಎಂದು ಹೇಳಲಾಗುತ್ತಿದೆ.

Share Post