ಹಿಜಾಬ್ ವಿವಾದ:ಹೈಕೋರ್ಟ್‌ನಲ್ಲಿ ವಿಚಾರಣೆ, ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನ್ಯಾ.ಸಲಹೆ
ಬೆಂಗಳೂರು: ಹಿಜಾಬ್ ವಿವಾದ ಅರ್ಜಿ ವಿಚಾರಣೆ ಉಚ್ಛ ನ್ಯಾಯಾಲಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಸಲಹೆ ನೀಡಿದ್ರು. ಅರ್ಜಿದಾರರು ಅನುಮತಿ ನೀಡಿದ್ರೆ ಇದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗುವುದು ಎಂದರು.
ನಿನ್ನೆಯಿಂದ ನಡೆದ ವಾದವನ್ನು ಆಲಿಸಲಾಗಿದೆ. ಎಲ್ಲವನ್ನೂ ಪರಿಶೀಲನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವಹಿಸುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ವಕೀಲ ಸಂಜರ್ ಹೆಗ್ಡೆ ವಾದ ಮಾಡಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ಎರಡು ತಿಂಗಳಲ್ಲಿ ಮುಗಿಯುತ್ತದೆ ಅಷ್ಟರಲ್ಲಿ ವಿವಾದ ಬಗೆಹರಿಯಬೇಕು. ಇದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ವಿವಾದದ ಕಿಡಿ ಹೆಚ್ಚಿರುವುದರಿಂದ ಹೈಕೋರ್ಟ್ ಏಕಸದಸ್ಯ ಪೀಠ ಈ ಅರ್ಜಿ ವಿಚಾರನೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದು ಉತ್ತಮ ಎಂದು ಭಾವಿಸಿದೆ.