ಹಿಜಾಬ್ ನಿಷೇಧ ವಾಪಸ್; ಇದು ತುಷ್ಟೀಕರಣ ರಾಜಕಾರಣ ಎಂದು ವಿಜಯೇಂದ್ರ
ಬೆಂಗಳೂರು; ನಿನ್ನೆ ಮೈಸೂರು ಜಿಲ್ಲೆಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯೋದಾಗಿ ಹೇಳಿರುವುದಾಗಿ ತಿಳಿಸಿದ್ದರು. ಇದೀಗ ವಿಪಕ್ಷಗಳಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಆಕ್ರೋಸ ಹೊರಹಾಕಿದ್ದಾರೆ.
ಇದು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ಎಂದು ವಿಜಯೇಂದ್ರ ಜರಿದಿದ್ದಾರೆ. ರಾಜ್ಯದಲ್ಲಿ ಯುವ ಸಮುದಾಯವನ್ನು ಧರ್ಮದ ಆಧಾರದಲ್ಲಿ ವಿಭಜಿಸಲಾಗುತ್ತಿದೆ ಎಂದೂ ವಿಜಯೇಂದ್ರ ಆರೋಪ ಮಾಡಿದ್ದಾರೆ.
ಸರ್ಕಾರದ ಈ ನಿರ್ಧಾರ ನಮ್ಮ ಶಿಕ್ಷಣ ಸಂಸ್ಥೆಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಸೃಷ್ಟಿಸುವಂತೆ ಮಾಡುತ್ತೆ. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗಳಿಗೆ ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧಾರ್ಮಿಕವಾಗಿ ಒಡೆಯುವುದನ್ನು ಉತ್ತೇಜಿಸುತ್ತಿದೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ.