Bengaluru

Hijab Row: ಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು-ಬೊಮ್ಮಾಯಿ

ಬೆಂಗಳೂರು: ಹಿಜಾಬ್‌ ವಿವಾದ ಕುರಿತಂತೆ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಉಚ್ಛ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಪ್ರಕರಣಗಳು ವರದಿಯಾಗಿವೆ. ನೂನ್ಯತೆಗಳನ್ನು ಸರಿಪಡಿಸುವ ಕುರಿತು ಹಾಗೂ ಎಸ್.ಒ.ಪಿಗಳ ಬಗ್ಗೆಸಭೆ ಕರೆದು ಚರ್ಚಿಸಲಾಗುವುದು.ಉಚ್ಛ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುವ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಪೋಷಕರ ಮೇಲಿದೆ. ಶಾಂತಿಯುತ ವಾತಾವರಣದಲ್ಲಿ ಅಂತಿಮ ತೀರ್ಪು ನೀಡಲು ಸಾಧ್ಯವಾಗಲಿದೆ. ಅಲ್ಲಿಯವರೆಗೆ ನಾವು ನಿಯಂತ್ರಣದಲ್ಲಿರಬೇಕು ಎಂದರು.

ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲಿವೆ ಎಂಬ ಶಾಸಕ ಜಮೀರ್ ಅಹಮದ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರ ವಿಚಾರಗಳು ಎಷ್ಟು ಸಮಂಜಸ, ಅವರ ಮನೋಭಾವ ಎಂಥದ್ದು ಎಂದು ಅವರ ಹೇಳಿಕೆಯಿಂದಲೇ ತಿಳಿಯುತ್ತದೆ. ಇಡೀ ದೇಶವೇ ಅವರ ಹೇಳಿಕೆಯನ್ನು ಖಂಡಿಸುತ್ತದೆ ಎಂದರು.

Share Post