Bengaluru

ಸಮವಸ್ತ್ರ ನೀತಿ ಎತ್ತಿ ಹಿಡಿದು ತೀರ್ಪು ನೀಡಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ಬೆದರಿಕೆ ಆರೋಪ

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಸುದ್ದಿ ಮಾಡ್ತಿರುವ ಹಿಜಾಬ್‌ ವಿವಾದಕ್ಕೆ ರಾಜ್ಯ ಹೈಕೋರ್ಟ್‌ ತ್ರಿಸದಸ್ಯ ಪೀಠ ತೆರೆ ಎಳೆದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸದಂತೆ ಸಮವಸ್ತ್ರ ಕಡ್ಡಾಯ ಎಂದು ಎಂದು ತೀರ್ಪು ನೀಡಿತ್ತು. ಹೈಕೋರ್ಟ್‌ ಅದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೂ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಹೀಗಿರುವ ಬೆನ್ನಲ್ಲೇ ತೀರ್ಪು ನೀಡಿದ ಮೂವರು ನ್ಯಾಯಮೂರ್ತಿಗಳಿಗೆ ಬೆದರಿಕೆ ಆರೋಪ ಕೇಳಿ ಬಂದಿದೆ.

ಹೌದು, ತಮಿಳುನಾಡಿನ ತೌಹೀದ್ ಜಮಾತ್ ನಿಂದ ಬೆದರಿಕೆ ಆರೋಪ ಕೇಳಿಬಂದಿದೆ. ನ್ಯಾಯಾಮೂರ್ತಿಗಳಾದ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಅವರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ಈ ಬಗ್ಗೆ ತೌಹೀದ್ ಜಮಾತ್ ಸಂಘಟನೆಯ ರೆಹಮತುಲ್ಲಾ ವಿರುದ್ಧ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿದೆ. ಗಿರೀಶ್ ಭಾರದ್ವಾಜ್ ಎಂಬುವರಿಂದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಮನವಿ ಮಾಡಿದ್ದಾರೆ.

Share Post