Bengaluru

ಕೋರ್ಟ್‌ ಆದೇಶ ಪಾಲಿಸಿ, ಪರೀಕ್ಷೆಗೆ ಗೈರಾಗಬೇಡಿ; ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು; ಹಿಜಾಬ್‌ ವಿಚಾರವಾಗಿ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದು, ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು, ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ, ಹೀಗಾಗಿ ಕೋರ್ಟ್‌ ತೀರ್ಪು ಪಾಲನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಈಗ ಪರೀಕ್ಷೆಗಳು ನಡೆಯುತ್ತಿವೆ. ಹಿಜಾಬ್‌ ವಿಚಾರವನ್ನು ಮುಂದಿಟ್ಟುಕೊಂಡು ಯಾರೂ ಪರೀಕ್ಷೆಗೆ ಗೈರಾಗಬಾರದು. ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ. ಮುಂದಿನ ಭವಿಷ್ಯ ಮುಖ್ಯ. ಹೀಗಾಗಿ ಎಲ್ಲರೂ ಕೋರ್ಟ್‌ ಆದೇಶ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಹಿಜಾಬ್‌ ತೀರ್ಪಿನ ಹಿನ್ನೆಲೆಯಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಎಚ್ಚರಿಸಿದ್ದಾರೆ.

ಈಗಾಗಲೇ ರಾಜ್ಯದ್ಯಂತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. ಕಾನೂನು ಸುವ್ಯವಸ್ಥತೆ ಕಾಪಾಡಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಗೃಹ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Share Post