ಅಪ್ಪ ಜೆಡಿಎಸ್ ಅಭ್ಯರ್ಥಿ, ಮಗ ಕಾಂಗ್ರೆಸ್ ಅಭ್ಯರ್ಥಿ
ಬೆಂಗಳೂರು; ಒಂದೇ ಕುಟುಂಬದವರು ಬೇರೆ ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡು ಚುನಾವಣೆಗೆ ಸ್ಪರ್ಧಿಸೋದನ್ನು ನೋಡಿದ್ದೇವೆ. ಅದೇ ರೀತಿ ಈ ಬಾರಿ ಹಾಸನದ ಮಾಜಿ ಸಚಿವ ಎ.ಮಂಜು ಕುಟುಂಬದಲ್ಲೂ ಆಗಿದೆ. ಎ.ಮಂಜು ಅವರಿಗೆ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಘೋಷಣೆಯಾಗಿದೆ. ಇತ್ತ ಅವರ ಪುತ್ರ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದುಕೊಂಡಿದ್ದಾರೆ.
ಎ.ಮಂಜು ಕೂಡಾ ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಹೇಳಲಾಗಿತ್ತು. ಆದ್ರೆ ಕೊನೇ ಕ್ಷಣದಲ್ಲಿ ಅವರು ಜೆಡಿಎಸ್‌ನಿಂದ ಟಿಕೆಟ್ ಪಡೆದುಕೊಂಡಿದ್ದಾರೆ. ಅರಕಲಗೂಡು ಕ್ಷೇತ್ರದಿಂದ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಮಡಿಕೇರಿ ಕ್ಷೇತ್ರದಿಂದ ಎ.ಮಂಜು ಪುತ್ರ ಮಂತರ್ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಂತರ್ ಗೌಡ ಅವರಿಗೆ ಟಿಕೆಟ್ ಸಿಕ್ಕಿದೆ.