BengaluruPolitics

ನಮ್ಮದು ಜನ ವಿರೋಧಿ ಸರ್ಕಾರ ಹೇಗಾಗುತ್ತದೆ..?; ಬಿಎಸ್‌ವೈಗೆ ಡಿ.ಕೆ.ಶಿವಕುಮಾರ್‌ ಪ್ರಶ್ನೆ

ಬೆಂಗಳೂರು; ನಾವು ಅಧಿಕಾರಕ್ಕೆ ಬಂದ ನೂರು ದಿನಗಳೊಳಗೆ ಕೊಟ್ಟಿದ್ದ ಗ್ಯಾರೆಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಯೋಜನೆಗಳಿಂದ ಲಾಭ ಪಡೆದ ಜನ ನಮ್ಮನ್ನು ಹರಸುತ್ತಿದ್ದಾರೆ. ಹೀಗಿರುವಾಗ ನಮ್ಮದು ಜನ ವಿರೋಧಿ ಸರ್ಕಾರ ಹೇಗಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜನವಿರೋಧಿ ಸರ್ಕಾರ ಎಂದು ಪ್ರತಿಭಟನೆ ನಡೆಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ತರಲಿ. ಅನಂತರ ಪ್ರತಿಭಟನೆ ಮಾಡಲಿ ಎಂದು ಸವಾಲು ಹಾಕಿದರು.

 

Share Post