BengaluruCrime

ಬೆಂಗಳೂರಿನಲ್ಲಿ ಭಾರಿ ಡ್ರಗ್ಸ್‌ ಜಾಲ ಪತ್ತೆ; 10 ಕೋಟಿ ಮೌಲ್ಯದ ಎಂಡಿಎಂಎ ವಶ

ಬೆಂಗಳೂರು; ಬೆಂಗಳೂರಿನಲ್ಲಿ ಭಾರಿ ಡ್ರಗ್ಸ್‌ ಜಾಲ ಪತ್ತೆಯಾಗಿದೆ.  ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು, 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.  ಡ್ರಗ್ಸ್​ ಫ್ಯಾಕ್ಟರಿ ನಡೆಸುತ್ತಿದ್ದ ನೈಜೀರಿಯಾ ಮೂಲದ ಪ್ರಜೆ ಬೆಂಜಮಿನ್ ಎಂಬಾತನನ್ನು ಬಂಧಿಸಲಾಗಿದೆ.

ಬಂಧಿತ ನೈಜೀರಿಯಾ ಪ್ರಜೆ ಬೆಂಜಮಿನ್ ರಾಮಮೂರ್ತಿ ನಗರದಲ್ಲಿ ವಾಸವಿದ್ದ. ಇದೇ ಏರಿಯಾದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಮೊದಲಿಗೆ ಅರೋಪಿ ಬಳಿ 100 ಗ್ರಾಂ MDMA ಪತ್ತೆಯಾಗಿತ್ತು. ತೀವ್ರ ವಿಚಾರಣೆ ನಡೆಸಿದಾಗ ಆತ ಎಂಡಿಎಂಎ ಕ್ರಿಸ್ಟಲ್ ತಯಾರಿಸುತ್ತಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ. ಮನೆಯಲ್ಲಿಯೇ ಕುಕ್ಕರ್‌ ಬಳಸಿ ಆತ ಡ್ರಗ್ಸ್‌ ತಯಾರಿಸುತ್ತಿದ್ದ ಎಂದು ತಿಳಿದುಬಂದಿದೆ.

ಎಸಿಪಿ ಕುಮಾರ್, ಇನ್ಸ್​ಪೆಕ್ಟರ್​ ಭರತ್​ಗೌಡ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

Share Post