ಮಹಿಳೆಗೆ ನಿಂದನೆ; ಕ್ಷಮೆ ಕೇಳಲು ಸಿದ್ಧ ಎಂದ ಅರವಿಂದ ಲಿಂಬಾವಳಿ
ಬೆಂಗಳೂರು; ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಶಾಸಕ ಅರವಿಂದ್ ಲಿಂಬಾವಳಿ ಆವಾಜ್ ಹಾಕಿರುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ನಾಯಕರು ಕೂಡಾ ಮಹಿಳೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆ ಅರವಿಂದ ಲಿಂಬಾವಳಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆದರೆ, ನಿಮ್ಮ ಪಕ್ಷದ ಇದೇ ಕಾರ್ಯಕರ್ತೆ ರೂತ್ ಸಗಾಯ್ ಮೇರಿ ಎಷ್ಟೋ ವರ್ಷಗಳಿಂದ ರಾಜಕಾಲುವೆ ಒತ್ತುವರಿ ಮಾಡಿ, ಜನರಿಗೆ ಸಮಸ್ಯೆಯುಂಟು ಮಾಡಿದ್ದಾರಲ್ಲ, ಅದನ್ನು ಖಾಲಿ ಮಾಡಲು ಹೇಳಿ. ನಿಮ್ಮ ಕಾರ್ಯಕರ್ತೆಯ ಮೊಂಡುತನವನ್ನು ಇಲ್ಲಿಗೇ ನಿಲ್ಲಿಸಲು ಹೇಳಿ ಎಂದು ಲಿಂಬಾವಳಿ ಟ್ವೀಟ್‌ನಲ್ಲಿ ಹೇಳಿದ್ದಾರೆ.