BengaluruPolitics

ನನಗೆ ಜೀರೋ ಟ್ರಾಫಿಕ್‌ ಸೌಲಭ್ಯ ಬೇಡ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ನನಗೆ ಜೀರೋ ಟ್ರಾಫಿಕ್‌ ಸೌಲಭ್ಯ ಬೇಡ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌ನಲ್ಲೇನಿದೆ..?
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah.

Share Post