BengaluruPolitics

ನನ್ನ ಬಳಿ 135 ಶಾಸಕರಿದ್ದಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ನನ್ನ ಬಳಿ 135 ಶಾಸಕರಿದ್ದಾರೆ. ಅವರೆಲ್ಲರನ್ನೂ ಸೋನಿಯಾ ಗಾಂಧಿಯವರಿಗೆ ಅರ್ಪಣೆ ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಎಲ್ಲರೂ ಸಿಎಂ ಹುದ್ದೆಗೆ ಆಸೆಪಡಲಿ ಎಂದು ಹೇಳಿದ್ದಾರೆ.

ಶಾಸಕಾಂಗ ಸಭೆಯಲ್ಲಿ ನಾವು ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಯಾವ ಶಾಸಕರು ಏನು ಮಾಡಿದ್ದಾರೋ ನನಗೆ ಗೊತ್ತಿಲ್ಲ. ಹೈಕಮಾಂಡ್‌ ಎಲ್ಲವನ್ನೂ ನಿರ್ಧಾರ ಮಾಡುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post