BengaluruPolitics

ನಾನು ಅಧಿಕಾರ ಬಿಟ್ಟುಕೊಡುತ್ತೇನೆ ಎಂದು ಎಲ್ಲೂ ಹೇಳಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ನಾನು ಅಧಿಕಾರ ಬಿಡುತ್ತೇನೆ ಎಂದು ಎಲ್ಲೂ ಹೇಳಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಪೂರ್ಣಾವಧಿ ನಾನೇ ಸಿಎಂ ಆಗಿರುತ್ತೇನೆ ಎಂದು ಪರೋಕ್ಷವಾಗಿ ಸುಳಿವು ಕೊಟ್ಟಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ನನ್ನ ಅಧಿಕಾರ ಮುಗಿದ ಮೇಲೆ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲಿದ್ದೇನೆ. ಅದನ್ನು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದೇನೆ. ಆದ್ರೆ ಅಧಿಕಾರ ಬಿಡುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಡಿ.ಕೆ.ಶಿವಕುಮಾರ್‌ ಕೂಡಾ ಸಿಎಂ ರೇಸ್‌ನಲ್ಲಿದ್ದರು. ಆದ್ರೆ ಹೈಕಮಾಂಡ್‌ ಸಿದ್ದರಾಮಯ್ಯಗೆ ಸಿಎಂ ಪಟ್ಟ ಕಟ್ಟಿತ್ತು. ಇಬ್ಬರ ನಡುವೆ ಮಾತುಕತೆ ನಡೆಸಿ, ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ, ಮುಂದಿನ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್‌ ಆಗಿರ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಹೈಕಮಾಂಡ್‌ನಲ್ಲಿ ಈ ರೀತಿಯ ಮಾತುಕತೆಗಳಾಗಿವೆ ಎಂದು ಹೇಳಲಾಗಿತ್ತು. ಆದ್ರೆ ಇದಕ್ಕೆ ಸಿದ್ದರಾಮಯ್ಯ ಮೇಲಿನಂತೆ ಸ್ಪಷ್ಟನೆ ಕೊಟ್ಟಿದ್ದಾರೆ.

 

Share Post