BengaluruPolitics

ನನಗೆ ರಾಜಕಾರಣದಲ್ಲಿ ಒಲವಿಲ್ಲ; ಕುಮಾರಸ್ವಾಮಿ ಹೀಗೆ ಹೇಳಿದ್ಯಾಕೆ..?

ರಾಮನಗರ; ನನಗೆ ರಾಜಕಾರಣದಲ್ಲಿ ಒಲವಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದಾಗಲೇ ಈ ಬಗ್ಗೆ ತೀರ್ಮಾನ ಮಾಡಬೇಕು ಎಂದುಕೊಂಡಿದ್ದೆ. ಆದ್ರೆ ನನ್ನ ಕಾರ್ಯಕರ್ತರಿಗೋಸ್ಕರ ಇದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಸುದ್ದಿಯನ್ನು ಅಲ್ಲಗೆಳೆದರು. ಈ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ಚರ್ಚೆ, ಊಹಾಪೋಹ ಹುಟ್ಟುವುದು ಸಹಜ ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ನಾನು ಈಗಾಗಲೇ ಜಿಲ್ಲಾವಾರು ಮುಖಂಡರ ಸಭೆ‌ ಮಾಡಿದ್ದೇನೆ. ಎಲ್ಲಾ ಮುಖಂಡರೂ ನಿಮ್ಮ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಏನು ಮಾಡಬೇಕು ಎಂಬುದನ್ನು ಚುನಾವಣೆ ಸಂದರ್ಭದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share Post